ನಷ್ಟ ತಡೆಯಲು ಆಸ್ತಿಗಳಿಗೆ ತುರ್ತು ಖಾತಾ ಪ್ರಕ್ರಿಯೆ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: 

   ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

   ಸೋಮವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.

   ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯನಿರ್ವಹಿಸಿ. ನಿಯಮ ಪಾಲಿಸದ ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅತ್ಯಗತ್ಯವಿದೆ. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

  ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ ಮಾಡಲಾಗುತ್ತಿದೆ. ಕೆಲವು ಅಧಿಕಾರಿಗಳೂ ಇದರ ಪರವಾಗಿದ್ದಾರೆ. ಇದೆಲ್ಲಕ್ಕೂ ಕಡಿವಾಣ ಅಗತ್ಯ. ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತಿ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌ ಎಂದರು.

Recent Articles

spot_img

Related Stories

Share via
Copy link