ಪಹಲ್ಗಾಮ್‌ ದಾಳಿ ಮಾಸ್ಟರ್ ಮೈಂಡ್ ಎನ್‌ಕೌಂಟರ್‌ಗೆ ಬಲಿ

ಶ್ರೀನಗರ:

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಮಾಸ್ಟರ್ ಮೈಂಡ್ ಹಸೀಮ್ ಮೂಸಾನನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.ಸೋಮವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರ ಹತ್ಯೆಯಾಗಿದ್ದು, ಅದರಲ್ಲಿ ಹಸೀಮ್ ಮೂಸಾ ಸಹ ಒಬ್ಬ.ಉಗ್ರರು ಅಡಗಿರುವ ಮಾಹಿತಿಯನ್ನು ಗುಪ್ತಚರ ಇಲಾಖೆಯಿಂದ ಪಡೆದಿದ್ದ ಭಾರತೀಯ ಸೇನೆ ಆಪರೇಷನ್ ಮಹಾದೇವ್ ಹೆಸರಿನಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ.

    ಮೂವರು ಉಗ್ರರ ಪೈಕಿ ಹಸೀಮ್ ಮೂಸಾ ಸಹ ಒಬ್ಬ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈತನ ಬಗ್ಗೆ ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು.ಸೇನಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಪಹಲ್ಗಾಮ್‌ ಭಯೋತ್ಪಾದಕರ ದಾಳಿ ಬಳಿಕ ಹಸೀಮ್ ಮೂಸಾ ಬಂಧನಕ್ಕೆ ಹುಡುಕಾಟವನ್ನು ನಡೆಸುತ್ತಿದ್ದವು. ಏಪ್ರಿಲ್‌ನಲ್ಲಿ ನಡೆದಿದ್ದ ಪಹಲ್ಗಾಮ್‌ ದಾಳಿಯಲ್ಲಿ 25ಕ್ಕೂ ಅಧಿಕ ಪ್ರವಾಸಿಗರು ಮೃತಪಟ್ಟಿದ್ದರು.

   ಹಸೀಮ್ ಮೂಸಾನನ್ನು ಸುಲೇಮಾನ್ ಶಾ ಎಂದು ಸಹ ಕರೆಯಲಾಗುತ್ತದೆ. ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.ಪಹಲ್ಗಾಮ್‌ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಹಳಸಿ ಹೋಗಿದೆ. ಭಾರತ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ಮಾಡುವ ಮೂಲಕ ಭಯೋತ್ಪಾದಕ ಶಿಬಿರಗಳನ್ನು ನಾಶ ಮಾಡಿತ್ತು.

Recent Articles

spot_img

Related Stories

Share via
Copy link