ನವದೆಹಲಿ:
ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ಯಸಭಾ ಸಂಸದರೂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ದೆಹಲಿಯಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವ್ಯಾಪಕ ಪೊಲೀಸರನ್ನು ಮತ್ತು ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಈ ಹಿಂದೆ ದೆಹಲಿಯ ಎಎಪಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು 2021 ರ ದೆಹಲಿ ಸರ್ಕಾರದ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನಲ್ಲಿದ್ದಾರೆ. ಈ ಹಿಂದೆ ಏಪ್ರಿಲ್‌ನಲ್ಲಿ ಇದೇ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಇದೀಗ ಇಡಿ ದಾಳಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ