ಜೋಗ ಜಲಪಾತ ಪ್ರವೇಶಕ್ಕೆ ತಾತ್ಕಾಲಿಕ ನಿರ್ಭಂದ

ಶಿವಮೊಗ್ಗ :

   ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು, ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

    ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Recent Articles

spot_img

Related Stories

Share via
Copy link