ದಾವಣಗೆರಯಲ್ಲಿ ಲಿಂಗಾಯತ ರಾಷ್ಟ್ರೀಯ ಸಮಾವೇಶ: ಈಶ್ವರ್‌ ಖಂಡ್ರೆ

ದಾವಣಗೆರೆ:

    ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಸಮಾವೇಶವನ್ನು ಡಿ.23 ಮತ್ತು 24ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರು ಶುಕ್ರವಾರ ಹೇಳಿದರು.

   ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರದ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆ ಪ್ರತಿ 5 ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಸಮಾವೇಶವನ್ನು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ 2023 ರ ಆರಂಭಕ್ಕೆ ಮುಂದೂಡಲಾಗಿತ್ತು. ಆದರೆ, ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದೂಡಲಾಗಿತ್ತು. ಇದೀಗ ಅಂತಿಮವಾಗಿ ಡಿ.23 ಮತ್ತು 24ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಈ ನಡುವೆ ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ವಿಧಾನಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿದ ಶಿವಶಂಕರಪ್ಪ ಅವರು, ವೀರಶೈವ-ಲಿಂಗಾಯತರಲ್ಲಿ ಒಗ್ಗಟ್ಟು ಮೂಡಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಿರಿ. ಈ ಹೇಳಿಕೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೋಗಿ ಸಿದ್ದರಾಮಯ್ಯ ಅವರನ್ನು ಕೇಳಿ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap