ಕಲಬುರಗಿ:
ಕೆಪಿಸಿಸಿ ಕಾರ್ಯಾಧ್ಯಕ್ಷ, ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರಿಗೆ ಸಚಿವ ಸಂಪುಟ ರಚನೆ ವೇಳೆ ಉಪ ಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಶ್ರೀಶೈಲಂ ಮತ್ತು ಸುಲಫಲ ಮಠದ ಪೀಠಾಧಿಪತಿ ಸಾರಂಗಧರ ದೇಶಿಕೇಂದ್ರ ಶಿವಾಚಾರ್ಯರು, ಚವದಾಪುರಿ ಹಿರೇಮಠ ಸಂಸ್ಥಾನದ ಡಾ.ರಾಜಶೇಖರ ಶಿವಾಚಾರ್ಯರು, ಮುಗಳನಾಗಾವಿ ಕಟ್ಟಿಮನಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸ್ವಾಮೀಜಿಗಳು, ‘ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಮತದಾರರು 135 ಸ್ಥಾನಗಳನ್ನು ನೀಡಿ, ಬಹುಮತದ ಸರಕಾರ ರಚನೆಗೆ ಹಾದಿ ಸುಗಮಗೊಳಿಸಿದ್ದಾರೆ. ಗಮನಾರ್ಹ ಅಂಶವೆಂದರೆ, ರಾಜ್ಯದಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಮತದಾರರು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಕಾರಣಕ್ಕಾಗಿ 34 ಲಿಂಗಾಯತ ಶಾಸಕರು ಆಯ್ಕೆಗೊಂಡಿದ್ದಾರೆ.