ಸರ್ಕಾರದ ಭವಿಷ್ಯ ನುಡಿದ ಈಶ್ವರಪ್ಪ ….!

ಶಿವಮೊಗ್ಗ: 

      ಕಾಂಗ್ರೆಸ್  ಯೋಗ್ಯತೆಗೆ ಇಲ್ಲಿಯವರೆಗೂ ಬಿಜೆಪಿಯ ಒಬ್ಬ ಶಾಸಕರನ್ನು ಕರೆದೊಯ್ಯಲು ಆಗಿಲ್ಲ. ‘ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರೊಲ್ಲ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು

   ಕಾಂಗ್ರೆಸ್‌ಗೆ ಬಿಜೆಪಿಯಿಂದ ಅಷ್ಟು ಜನ ಬರುತ್ತಾರೆ, ಇಷ್ಟು ಜನ ಬರುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಿಮಗೆ (ಕಾಂಗ್ರೆಸ್) ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ಯಿರಿ ನೋಡೋಣ ಎಂದು ಸವಾಲು ಹಾಕಿದ ಈಶ್ವರಪ್ಪ, ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಟಾಂಗ್ ನೀಡಿದರು.

    ಸೂರ್ಯ-ಚಂದ್ರ ಇರುವವರೆಗೂ ಕಾಂಗ್ರೆಸ್ ಬಿಟ್ಟು ಹೋಗಿರುವ 17 ಜನರಲ್ಲಿ ಒಬ್ಬರನ್ನೂ ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಏಕೆ ಬಿಜೆಪಿ ಶಾಸಕರ ಮನೆ ಕಾಯುತ್ತಿದ್ದಾರೆ ಎಂದು ಈಶ್ವರಪ್ಪ ಪ್ರಶ್ನಿಸಿದರು.

   ಗ್ಯಾರಂಟಿ ಯೋಜನೆಗಳ ಜಾರಿಗೆ ತರುವ ಗದ್ದಲದಲ್ಲಿಯೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸರ್ಕಾರ ಕೂಡ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

   ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ತಿಹಾರ್ ಜೈಲಿನಲ್ಲಿ ಇದ್ದು ಬಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗ ಪ್ರಜ್ವಲ್ ರೇವಣ್ಣ ಅನರ್ಹತೆಯ ವಿಚಾರ ಮುಂದಿಟ್ಟುಕೊಂಡು, ಆಸ್ತಿ ವಿಚಾರಗಳನ್ನು ಜನಪ್ರತಿನಿಧಿಗಳು ಮುಚ್ಚಿಡಬಾರದು ಎಂದು ಬುದ್ಧಿ ಹೇಳುತ್ತಿದ್ದಾರೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದು ಛೇಡಿಸಿದರು.

   ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link