ಚುನಾವಣಾ ಭವಿಷ್ಯ ನುಡಿದ ಈಶ್ವರಪ್ಪ…!

ಶಿವಮೊಗ್ಗ

     ನಾವು ಸುಮಾರು 140 ಸ್ಥಾನಗಳನ್ನು ಗೆಲ್ಲುತ್ತೇವೆ ಮತ್ತು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

      ಈ ಕುರಿತು ಶಿವಮೊಗ್ಗದ ಸೈನ್ಸ್ ಪಿಯು ಕಾಲೇಜಿನಲ್ಲಿ ಮಾಜಿ ಸಚಿವ ಈಶ್ವರಪ್ಪ ಕುಟುಂಬಸ್ಥರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್  ಮತ್ತು ಜೆಡಿ ಎಸ್ ಮುಸ್ಲಿಮರ ಓಲೈಕೆಗೆ ಯತ್ನಿಸಿವೆ ಆದರೆ ರಾಷ್ಟ್ರೀಯವಾದಿ ಮುಸ್ಲಿಮರು ನಮ್ಮೊಂದಿಗಿದ್ದಾರೆ. ಪಿಎಫ್‌ಐನಂತಹ ದೇಶವಿರೋಧಿ ಸಂಘಟನೆಗಳನ್ನು ಬೆಂಬಲಿಸುವವರು ಕಾಂಗ್ರೆಸ್ ಜೊತೆಗಿದ್ದಾರೆ ಎಂದು ಹೇಳಿದರು.

     ಶಿವಮೊಗ್ಗ ನಗರದಲ್ಲಿ ನಾವು 100 ಕ್ಕೆ 100 ರಷ್ಟು ಗೆಲ್ಲುತ್ತೇವೆ, ಇಲ್ಲಿ ಎಲ್ಲಾ ವರ್ಗದವರಿಗೆ ಅಭಿವೃದ್ದಿ ಕೆಲಸ ಮಾಡಿದ್ದೇವೆ, ಇವನ್ನ ಮೆಚ್ಚಿ ಹೆಚ್ಚನ ಮತಗಳಿಂದ ಜನರು ನಮ್ಮನ್ನ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನಾನು ಪಕ್ಷದ ಶಿಸ್ತಿನ ಸಿಪಾಯಿ ಹಾಗಾಗಿ ಪಕ್ಷ ಹೇಳಿದಂತೆ ನಾನು ಕೆಲಸ ಮಾಡಿದ್ದೇನೆ, ನಾನು ಸ್ಪರ್ಧೆ ಮಾಡಿಲ್ಲ. ಮುಂದೆ ಯಾವುದೇ ಜವಾಬ್ದಾರಿ ಕೊಟ್ಟರು ನಾನು ನಿಭಾಯಿಸುತ್ತೇನೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಸೋಲ್ತಾರೆ. ನಿನ್ನೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದಿದ್ದಾರೆ. ಅವರು ಭಕ್ತಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿಲ್ಲ, ಹಿಂದೂಗಳ ಪರವಾಗಿದ್ದೇವೆ ಎಂದು ತೋರಿಸಲು ಹೋಗಿದ್ದೇರೆ ಎಂದು ಹೇಳಿದರು.

     ಅವರು ಧರ್ಮ ವಿರೋಧಿ ಆಗಿದ್ದಾರೆ, ಯಾವುದೇ ಕಾರಣಕ್ಕೂ ಅವರು ರಾಜ್ಯದಲ್ಲಿ ಗೆಲ್ಲುವುದಿಲ್ಲ, ವಿರೋಧ ಪಕ್ಷದಲ್ಲೂ ಇರ್ತಾರೋ ಇಲ್ವೋ ಎಂಬ ಅನುಮಾನ ಎಂದ ಅವರು, ನಿನ್ನೆ, ಇವತ್ತು ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ಕಾಂಗ್ರೆಸ್‌ ನವರು ಕೊನೆ ಕ್ಷಣದಲ್ಲಿ ನಾವು ನಿಮ್ಮ ಪರ ಇದ್ದೇವೆ ಎಂದು ತೋರಿಕೆಯ ಪ್ರಚಾರ ಮಾಡುತ್ತಿದ್ದಾರೆ ಎಂದರು, ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಸೋಲುವುದು ಗ್ಯಾರಂಟಿ ಎಂದು ಕಿಡಿಕಾರಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap