ಶಿರಾಳಕೊಪ್ಪದ ರಾಷ್ಟ್ರಭಕ್ತರ ಬಳಗದ ಕಚೇರಿಯಲ್ಲಿ ಮಾಂತ್ರಿಕ ಕೃತ್ಯ : ಈಶ್ವರಪ್ಪ

ಶಿವಮೊಗ್ಗ:

    ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಗುರುವಾರ ಒತ್ತಾಯಿಸಿದ್ದಾರೆ. 

    ಮತದಾನದ ದಿನದಂದು ವೈರಲ್ ಆಗಿರುವ ಸುಳ್ಳು ಸುದ್ದಿ ಮತ್ತು ವಿಡಿಯೋಗಳನ್ನು ತಯಾರಿಸಿ ಹರಿಬಿಟ್ಟಿರುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇನೆ. ಈ ಸಮಸ್ಯೆಯು ಕೆಲವು ಮತದಾರರನ್ನು ಗೊಂದಲಕ್ಕೀಡುಮಾಡಿದೆ ಮತ್ತು ಅನೇಕರು ನನ್ನ ಪರವಾಗಿ ತಮ್ಮ ಮತಗಳನ್ನು ಚಲಾಯಿಸುವುದನ್ನು ತಡೆದಿದೆ ಎಂದು ಈಶ್ವರಪ್ಪ ಹೇಳಿದರು. 

    ಈ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮೇ 15ರವರೆಗೆ ಕಾಲಾವಕಾಶ ನೀಡುವುದಾಗಿ ತಿಳಿಸಿದ ಈಶ್ವರಪ್ಪ, ತಪ್ಪಿದ್ದಲ್ಲಿ ಮುಂದಿನ ಹಾದಿಯ ಬಗ್ಗೆ ತೀರ್ಮಾನಿಸಬೇಕಾಗುತ್ತದೆ ಎಂದರು.

   

‘ಬಿಜೆಪಿ ನನ್ನ ತಾಯಿ ಇದ್ದಂತೆ, ನಾನು ಪಕ್ಷದ ಜೊತೆ ಇರುತ್ತೇನೆ. ಚುನಾವಣಾ ಫಲಿತಾಂಶದ ನಂತರ ಹೊಸ ಪಕ್ಷ ಕಟ್ಟಲು ನಾನು ಬಿಎಸ್ ಯಡಿಯೂರಪ್ಪ ಅಲ್ಲ. ಬಿಜೆಪಿಯ ಹಿಂದುತ್ವ ಸಿದ್ಧಾಂತವನ್ನು ರಕ್ಷಿಸುವುದು ನನ್ನ ಏಕೈಕ ಗುರಿಯಾಗಿದೆ’ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap