ಸಮಗ್ರ ಕೃಷಿ ಪದ್ಧತಿ ಶ್ರೆಷ್ಠತೆ ಕೇಂದ್ರ ಹಾಗೂ ಶೀಥಲ ಘಟಕದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

ಚಿಕ್ಕಬಳ್ಳಾಪುರ:  

ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮಂಗಳವಾರ ನಗರದ ಹೊರವಲಯದ ಜಡಲತಿಮ್ಮನಹಳ್ಳಿ ಗ್ರಾಮದ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ (ಕೆ.ಎಸ್‌.ಎಸ್.ಸಿ) ಆವರಣದಲ್ಲಿ RIDF -27 ಯೋಜನೆಯಡಿ 376 ಲಕ್ಷ ರೂ. ವೆಚ್ಚದಲ್ಲಿ ಸಮಗ್ರ ಕೃಷಿ ಪದ್ಧತಿ ಶ್ರೇಷ್ಠತೆ ಕೇಂದ್ರ ಹಾಗೂ 915 ಲಕ್ಷ ರೂ. ವೆಚ್ಚದಲ್ಲಿ ಶೀಥಲ ಘಟಕದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ
ಕೆ.ವಿ.ನಾಗರಾಜ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಕೃಷಿ ಇಲಾಖೆಯ ಜಂಟಿ ಉಪನಿರ್ದೇಶಕಿ ರೂಪಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link