ಎತ್ತಿನಹೊಳೆ ಮೊದಲನೆಹಂತ ಲೋಕಾರ್ಪಣೆ ಮಾಡಿದ ಸಿಎಂ…!

ಸಕಲೇಶಪುರ

     ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಶುಕ್ರವಾರ ಲೋಕಾರ್ಪಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್​ಗಳನ್ನು ಆನ್​ ಮಾಡುವ ಮೂಲಕ ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಾಥ್​ ನೀಡಿದರು. ಅಲ್ಲದೇ ಇದೇ ವೇಳೆ ಏಳು ಸಚಿವರಿಂದ ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್​​ಗಳಿಗೂ ಚಾಲನೆ ನೀಡಲಾಗಿಯಿತು.

   ಇಂದು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು. ಕಾರ್ಯಕ್ರಮದ ಉಸ್ತುವಾರಿಯನ್ನು ಜಲಸಂಪನ್ಮೂಲ ಇಲಾಖೆ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಂದಿದ್ದಾರೆ.7 ವಿಯರ್​​ಗಳ ಮೂಲಕ ಪಂಪ್‌ ಮಾಡಿದ್ದ ನೀರಿಗೆ ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ 4ರಲ್ಲಿ ಬಾಗಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬಾಗಿನ ಅಪರ್ಪಿಸಲಿದ್ದಾರೆ. ಬಾಗಿನ ಅರ್ಪಣೆ ಸಮೀಪವೇ ಬೃಹತ್ ಬಹಿರಂಗ ಸಮಾವೇಶ ಆಯೋಜನೆ ಮಾಡಲಾಗಿದೆ. ಹೆಬ್ಬನಹಳ್ಳಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಸಮಾರಂಭ ಆರಂಭವಾಗಲಿದೆ.

 

Recent Articles

spot_img

Related Stories

Share via
Copy link
Powered by Social Snap