ಶಿಕ್ಷಣದ ಜೊತೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ : ಥಾವರ್ ಚಂದ್ ಗೆಹ್ಲೋಟ್

ದಾವಣಗೆರೆ 

    ಶಿಕ್ಷಣದ ಜೊತೆಗೆ ಕ್ರೀಡಾ ಸಾಂಸ್ಕçತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಅದು ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳಿಸುವ ಜೊತೆಗೆ ನೀವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಮುನ್ನಡೆಸುವ ಅವಕಾಶವನ್ನು ಪಡೆಯುತ್ತೀರಿ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.ದಾವಣಗೆರೆ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಣ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳನ್ನು ಜೋಡಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತ, ಆತ್ಮನಿರ್ಭರ ಭಾರತ ಮಾಡಲು ಬದ್ಧರಾಗಿದ್ದಾರೆ. ಹೊಸ  ಶಿಕ್ಷಣ ನೀತಿಯು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲವಾಗಿ ಮತ್ತು ಯಶಸ್ವಿ ಯಾಗುವಂತೆ ಮಾಡಲಿದೆ. ನವ ಭಾರತ ನಿರ್ಮಾಣದಲ್ಲಿ ಇದರ ಪಾತ್ರ ನಿರ್ಣಾಯಕವಾಗಿರುತ್ತದೆ ಎಂದರು.

    ಈ ಶಿಕ್ಷಣ ನೀತಿಯ ಗುರಿಯು ಎಲ್ಲರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು, ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ನೆಚ್ಚಿನ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುತ್ತದೆ. ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸುವಲ್ಲಿ ನಿಮ್ಮ ಕೊಡುಗೆಯನ್ನು ನೀಡಿ ಮತ್ತು ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿ ಮಾಡುವ ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಿ ಎಂದು ಕರೆ ನೀಡಿದರು.

  ಪ್ರಸ್ತುತ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಮುಂದಿನ 25 ವರ್ಷಗಳಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮುಂದಿನ 25 ವರ್ಷಗಳು ಅದ್ಭುತ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದರ ಜೊತೆಗೆ ವಿಶ್ವದ ಪ್ರಮುಖ   ಒಂದಾಗಬೇಕು. ಮತ್ತೇ ಭಾರತವನ್ನು ವಿಶ್ವಗುರವನ್ನಾಗಿಸಲು ಯುವಪೀಳಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ