ಮೈಸೂರು
ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನ ಪಡೆಯಲು ಮುಂದಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಗಾಳ ಹಾಕಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯ ಪಕ್ಷದ ನಾಯಕರಿಗೆ ನೇರವಾಗಿ ಆಹ್ವಾನ ನೀಡಿದ್ದಾರೆ.
ಹೌದು, ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರು ಸ್ವಾಗತ. ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲ, ನಮ್ಮ ಪಕ್ಷಕ್ಕೆ ಯಾರೇ ಬಂದರು ಸ್ವಾಗತ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಹೇಳಿದ್ದಾರೆ.
ಇನ್ನೂ ಈ ವೇಳೆ ರಾಜ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ ರೀ, ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ. ಸರ್ಕಾರ ಬಂದು ನೂರು ದಿನ ಆಗಿದೆ ಎಂದು ರಾಜ್ಯ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ. ಪ್ರಧಾನಿ ಬಿಜೆಪಿ ನಾಯಕರನ್ನ ಭೇಟಿ ಮಾಡದ ವಿಚಾರವಾಗಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿನೇ ಇವರನ್ನ ಭೇಟಿ ಬರಬೇಡಿ ಅಂದಿದ್ರತೆ ಅಂಥ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ