ತಿರುವನಂತಪುರಂ:
ತಿರುವನಂತಪುರಂ ಬಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇರಳದ ಮಾಜಿ ಮುಖ್ಯಮಂತ್ರಿ ಒಮ್ಮನ್ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸ ಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿ ಚಾಂಡಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಿಎಂ ಒಮ್ಮನ್ ಚಾಂಡಿ ಅವರು ನ್ಯೂಮೋನಿಯಾದಿಂದ ಮುಕ್ತರಾಗಿದ್ದಾರೆ ವೈದ್ಯರು ತಿಳಿಸಿದ್ದು, ಚಾಂಡಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪಕ್ಷ ನಿರ್ಧರಿಸಿದೆ ಹೇಳಿದರು.
ಚಾಂಡಿ ಅವರು ಸ್ವಲ್ಪ ದಣಿದಿದ್ದು , ಅವರು ಈಗ ನ್ಯುಮೋನಿಯಾದಿಂದ ಮುಕ್ತರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಪ್ರಯಾಣ ಮತ್ತು ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಗಳನ್ನು ಎಐಸಿಸಿ ವ್ಯವಸ್ಥೆ ಮಾಡುತ್ತದೆ ಎಂದು ವೇಣುಗೋಪಾಲ್ ಸುದ್ದಿಗಾರರಿಗೆ ತಿಳಿಸಿದರು.
ತಮ್ಮ ತಂದೆ ನ್ಯುಮೋನಿಯಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾಗಲೂ ಕುಟುಂಬದ ವಿರುದ್ಧ ಸುಳ್ಳು ಪ್ರಚಾರ ಆಗುತಿತ್ತು.ಯಾವುದೇ ರೀತಿಯ ಚಿಕಿತ್ಸೆಯಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ಸುಳ್ಳು ಸುದ್ದಿಗಳನ್ನು ಹರಡುವುದು ಸರಿಯಲ್ಲ. ನಮ್ಮ ಬಳಿ ಎಲ್ಲಾ ವೈದ್ಯಕೀಯ ದಾಖಲೆಗಳಿವೆ ಎಂದು ಉಮ್ಮನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವ ಎಲ್ಲಾ ವಿಷಯಗಳ ಬಗ್ಗೆ ಸಂಪೂರ್ಣ ಅರಿತಿದ್ದು, ಉತ್ತಮ ಚಿಕಿತ್ಸೆಗಾಗಿ ಚಾಂಡಿಯನ್ನು ಜರ್ಮನಿಗೆ ಕರೆದೊಯ್ಯಲು ಮುಂದಾಗಿದೆ ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








