ಹಾವೇರಿ
ಕರ್ನಾಟಕ ಲೋಕಸಭಾ ಚುನಾವಣೆ ರಂಗೇರಿದ್ದು, ಸೋಮವಾರ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಬಸವರಾಜ ಬೊಮ್ಮಾಯಿ 54 ಕೋಟಿ ಮೌಲ್ಯದ ಆಸ್ತಿ ಘೋಷಣೆ ಮಾಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಯಾಗಿದ್ದರು ಅವರ ಬಳಿ ಸ್ವಂತ ವಾಹನವಿಲ್ಲಅಂತ ಘೋಷಣೆ ಮಾಡಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಮ್ಮ ಬಳಿ 29.58 ಕೋಟಿ ರೂಪಾಯಿ ಆಸ್ತಿ ಇದೆ ಎಂದು ಮಾಹಿತಿ ನೀಡಿದ್ದಾರೆ. ಇದರ ಜತೆಗೆ 20 ಕೋಟಿ ರು. ಮೌಲ್ಯದ ಪಿತ್ರಾರ್ಜಿತ ಆಸ್ತಿಯೂ ತಮಗೆ ಬಂದಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೋಮವಾರ ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಆಸ್ತಿ ವಿವರವನ್ನ ಬಸವರಾಜ ಬೊಮ್ಮಾಯಿ ಘೋಷಿಸಿಕೊಂಡಿದ್ದಾರೆ. ಬೊಮ್ಮಾಯಿ ಬಳಿ 3 ಲಕ್ಷ ರು. ನಗದು, ಬ್ಯಾಂಕ್ ಹಾಗೂ ಫೈನಾನ್ಸ್‌ಗಳಲ್ಲಿ 51 ಲಕ್ಷ ರು. ಠೇವಣಿ, ಬಾಂಡ್, ವಿವಿಧ ಕಂಪನಿ ಶೇರುಗಳಲ್ಲಿ 3.30 ಕೋಟಿ ರು. ಹೂಡಿಕೆ ಕುರಿತು ಮಾಹಿತಿ ನೀಡಿದ್ದಾರೆ.
1.59 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹೊಂದಿರುವ ಬೊಮ್ಮಾಯಿ ಅವರ ಬಳಿ ಯಾವುದೇ ಸ್ವಂತ ವಾಹನ ಇಲ್ಲ. 6.12 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 96.8 ಲಕ್ಷ ಮೌಲ್ಯದ ಕೃಷಿ ಜಮೀನು, 7 ಕೋಟಿ ಮೌಲ್ಯದ ಕೃಷಿಯೇತರ ಜಮೀನನ್ನ ಹೊಂದಿದ್ದಾರೆ. 6.3 ಕೋಟಿ ರೂ. ಮೌಲ್ಯದ ವಾಣಿಜ್ಯ ಕಟ್ಟಡ ಹೊಂದಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರು ಹಾಗೂ ಶಿಗ್ಗಾಂವಿಯಲ್ಲಿ 9.18 ಕೋಟಿ ರೂ. ಮೌಲ್ಯದ ಮನೆ ಸೇರಿ 23.45 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ.
5.31 ಕೋಟಿ ಸಾಲ ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಬೊಮ್ಮಾಯಿ ಉಲ್ಲೇಖಿಸಿದ್ದು, 20 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಹೊಂದಿರುವ ಬೊಮ್ಮಾಯಿ, ಪತ್ನಿ ಬಳಿ 1.32 ಕೋಟಿ ಮೌಲ್ಯದ ಚರಾಸ್ತಿ, ಪುತ್ರಿ ಬಳಿ 1.53 ಕೋಟಿ ಚರಾಸ್ತಿ ಇದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ