ಆಂಧ್ರದ ಮಾಜಿ ಸಿಎಂ ಬಿಜೆಪಿ ಸೇರ್ಪಡೆ….!

ನವದೆಹಲಿ

      ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ರೆಡ್ಡಿ, ಪಕ್ಷದ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಸಂಸದ ಕೆ ಲಕ್ಷ್ಮಣ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

    ಈ ಮೊದಲು ಮಾರ್ಚ್ 13, 2023 ರಂದು ರೆಡ್ಡಿ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರವೊಂದನ್ನು ಕಳುಹಿಸಿದ್ದರು. ದಯವಿಟ್ಟು ಈ ಪತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯಾಗಿ ಸ್ವೀಕರಿಸಿ ಎಂದು ಅವರು ಪತ್ರದಲ್ಲಿ ಬರೆದಿದ್ದರು.

ಎನ್ ಕಿರಣ್ ಕುಮಾರ್ ರೆಡ್ಡಿ ಅವರು ನವೆಂಬರ್ 11, 2010 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಆದರೆ ರಾಜ್ಯವನ್ನು ವಿಭಜಿಸುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ವಿರೋಧಿಸಿ ಮಾರ್ಚ್ 10, 2014 ರಂದು ರಾಜೀನಾಮೆ ನೀಡಿದ್ದರು. ವಿಶೇಷವೆಂದರೆ, ರಾಜ್ಯ ವಿಭಜನೆಯ ಕುರಿತು ಕೇಂದ್ರ ಸರ್ಕಾರದ ಕರಡು ಮಸೂದೆಯನ್ನು ವಿರೋಧಿಸಿ ಅವರು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ