ಬೆಂಗಳೂರು :
ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.