ಚಿಕ್ಕಮಗಳೂರು:
ಮಾಜಿ ಸಚಿವ ಮಾಧುಸ್ವಾಮಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.
ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೆ ತೆರಳುವ ವೇಳೆ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಗುಜುರಿ ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಬೀರೂರಿನಲ್ಲಿ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ