ರೈತರಿಗೆ ಶುಭ ಸುದ್ದಿ ನೀಡಿದ ಸರ್ಕಾರ …..!

ನವದೆಹಲಿ

   ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಿಂದ ಉದ್ದು, ಸೋಯಾಬೀನ್ ಖರೀದಿಗೆ ಕೇಂದ್ರ ಖರೀದಿಗೆ ಕೃಷಿ ಸಚಿವಾಲಯ ಅನುಮತಿ ನೀಡಿದೆ ಎಂದು ಕೇಂದ್ರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವ ಹಿನ್ನಲೆ ಖರೀದಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

   ಉದ್ದು ಮತ್ತು ಸೋಯಾಬೀನ್ ಪ್ರತಿ ಕ್ವಿಂಟಾಲ್​ಗೆ ಕ್ರಮವಾಗಿ 7,400 ಮತ್ತು 4,892 ರೂ. ಮೌಲ್ಯದಲ್ಲಿ ಖರೀದಿಗೆ ಅನುಮತಿ ದೊರೆತಿದೆ. ರಾಜ್ಯದ ರೈತರು ಬೆಳೆದ 19,760 ಮೆಟ್ರಿಕ್ ಟನ್ ಉದ್ದಿನ ಬೇಳೆ, 1,03,315 ಮೆಟ್ರಿಕ್ ಟನ್ ಸೋಯಾಬೀನ್ ಖರೀದಿ ಮಾಡಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು.

   ಇದು ಗಣೇಶ ಹಬ್ಬಕ್ಕೆ ಕರ್ನಾಟಕ ರೈತರಿಗೆ ಕೇಂದ್ರ ಸರ್ಕಾರ ನೀಡಿದ ಕೊಡುಗೆಯಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು. ಕರ್ನಾಟಕ ಸರ್ಕಾರವು ತಕ್ಷಣವೇ ರಾಜ್ಯಾದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಅವರು ಮನವಿ ಮಾಡಿದರು.

   ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ ರೈತರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

   ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಹೆಸರು ಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿತ್ತು. ಇದೀಗ ಗಣೇಶ ಹಬ್ಬಕ್ಕೆ ರಾಜ್ಯದ ರೈತರಿಗೆ ಉಡುಗೊರೆಯಾಗಿ ಉದ್ದಿನಬೇಳೆ ಮತ್ತು ಸೋಯಾಬೀನ್‌ಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ ಎಂದು ಸಚಿವ ಜೋಶಿ ಹೇಳಿದರು.

 

Recent Articles

spot_img

Related Stories

Share via
Copy link
Powered by Social Snap