ಬೆಂಗಳೂರು : ಫೆ.22 ರಾಷ್ಟ್ರೀಯ ತೋಟಗಾರಿಕೆ ಮೇಳ

ಬೆಂಗಳೂರು

     ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮೇಳ 2023 ಆಯೋಜನೆ ಮಾಡಲಾಗಿದ್ದು ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ‘ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ’ ಎಂಬ ಶೀರ್ಷಿಕೆಯಡಿ ರಾಷ್ಟ್ರೀಯ ತೋಟಗಾರಿಕೆ ಮೇಳ 2023 ಮೇಳ ನಡೆಯಲಿದೆ.

   ರೈತರಿಗೆ ಕೃಷಿ ಸಂಬಂಧಿತ ಮಾಹಿತಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು, ಸಮಸ್ಯೆಗಳ ಪರಿಹಾರ ಸೇರಿದಂತೆ ಅನೇಕ ಅಂಶಗಳನ್ನು ತಿಳಿಸುವ ಸಲುವಾಗಿ ಫೆಬ್ರವರಿ 22 ರಿಂದ 25 ರವರೆಗೆ ಮೇಳ ಆಯೋಜನೆ ಮಾಡಲಾಗಿದೆ.ಈ ಬಾರಿಯ ಮೇಳದ ವಿಶೇಷವಾಗಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಜೊತೆಗೆ ಇನ್ನಿತರ ಸಂಸ್ಥೆಗಳು ಹಾಗೂ ತೋಟಗಾರಿಕೆ ಉದ್ಯಮಿಗಳ ಸಹಯೋಗದಲ್ಲಿ ಮೇಳ ನಡೆಯಲಿದೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಮೇಳಕ್ಕೆ ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap