ಬೆಂಗಳೂರು:
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಭೇಟಿ ವೇಳೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಹಿರಿಯ ನಾಯಕರಾದ ಫಾರೂಕ್ ಅಬ್ದುಲ್ಲಾ ಅವರ ಭೇಟಿ ಬಹುಕಾಲ ನೆನಪಲ್ಲಿ ಉಳಿಯುವಂತಹದ್ದು ಎಂದು ಬರೆದುಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ