ಮಂಗಳೂರು :
ಬಿಜೆಪಿ ಮುಖಂಡ, ಪೊಟೋಗ್ರಾಫರ್ ಮೇಲೆ ತಲವಾರು ದಾಳಿ ನಡೆಸಿದ ಮೂವರನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮುಹಮ್ಮದ್ ಅರ್ಷದ್, ಅಬ್ದುಲ್ ರೆಹಮಾನ್, ಮುಹಮ್ಮದ್ ಸೈಫುದ್ದೀನ್ ಎಂದು ಗುರುತಿಸಲಾಗಿದೆ.
ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಫೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಫೋಟೋ ತೆಗೆಸುವಂತೆ ಬಂದು ಫೋಟೋಗ್ರಾಫರ್, ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅವರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.
ಇತ್ತೀಚೆಗೆ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿನೇಶ್ ರವರು ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದ ದ್ವೇಷದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ದಿನೇಶ್ ಅವರನ್ನು ಕೊಲ್ಲುವ ಉದ್ದೇಶದಿಂದ ಕತ್ತಿಯಿಂದ ತಲೆಗೆ, ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ಹಲ್ಲೆ ನಡೆಸಿ ತೀವ್ರ ಗಾಯವಾಗಿದ್ದು, ಆ ವೇಳೆಯಲ್ಲಿ ಅಲ್ಲಿದ್ದ ಶೇಖರ್ ಪೂಜಾರಿ ರವರು ಹಲ್ಲೆಯಾಗುವುದನ್ನು ತಪ್ಪಿಸಲು ಅಲ್ಲೇ ಇದ್ದ ಚೇರ್ ನಿಂದ ಜೋರಾಗಿ ಇಬ್ಬರು ಆರೋಪಿಗಳಿಗೆ ಹೊಡೆದಿದ್ದು, ಅವರ ಕೈಗೆ ಗಾಯವಾಗಿರುತ್ತದೆ.
ನಂತರ ದಿನೇಶ್ ರವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡಲೇ ಆರೋಪಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಪ್ರಸನ್ನ ಹಾಗೂ ಸಿಬ್ಬಂದಿರವರು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ