ಬೆಂಗಳೂರು :
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಮೂಲದ ಶಿವಲಿಂಗ ಪಾಟೀಲ್ ಬಂಧಿತ ಆರೋಪಿ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಈ ಕುರಿತು ಪ್ರತಿಕ್ರಿಯಿಸಿ, ಮಂಗಳವಾರ ಆರೋಪಿ ಶಿವಲಿಂಗನನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಬಂಧಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದ ಹಿಂದಷ್ಟೇ ಸೆಂಟರ್ ಮುಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿಯಿಂದ ಬಂಧಿತ ಆರೋಪಿ ರಾಚಪ್ಪ ಎಂಬುವವರಿಂದ ಪ್ರಶ್ನೆ ಪತ್ರಿಕೆ ತರಿಸಿಕೊಂಡು ಪರೀಕ್ಷಾ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ರವಾನಿಸುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 25 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ