ಮೈಸೂರು
ಕೆಲ ದಿನಗಳಿಂದ ಜೆ ಡಿ ಎಸ್ ಪಕ್ಷದಲ್ಲಿ ಉಂಟಾಗಿರುವ ಟಿಕೆಟ್ ಹಂಚಿಕೆಯ ಗೊಂದಲಗಳಿಗೆ ನಿಖಿಲ್ ಕುಮಾರ ಸ್ವಾಮಿ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ರಾಜ್ಯದ ಯಾವುದೇ ಕ್ಷೇತ್ರಗಳ ಟಿಕೆಟ್ ಹಂಚಿಕೆ ಮತ್ತು ಘೋಷಣೆಯ ಬಗ್ಗೆ ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ನಮ್ಮ ಕುಟುಂಬದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಿಖಿಲ್ ಕುಮಾರಸ್ವಾಮಿ ಮೈಸೂರಿನಲ್ಲಿ ತಿಳಿಸದರು.
ಎಚ್.ಡಿ. ರೇವಣ್ಣ ಮಂಡ್ಯ ಜಿಲ್ಲೆಯಿಂದ ಸ್ಪರ್ಧಿಸುವ ವಿಚಾರವೂ ನನಗೆ ಗೊತ್ತಿಲ್ಲ. ನಾನು ರಾಜ್ಯಾಧ್ಯಕ್ಷ ಅಲ್ಲ, ಯುವ ಘಟಕದ ಅಧ್ಯಕ್ಷ. ನನ್ನ ಪರಿಮಿತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಮತ್ತು ಪಕ್ಷದ ಆಂತರಿಕ ವಿಚಾರಗಳನ್ನು ಬೀದಿಯಲ್ಲಿ ಚೆರ್ಚಿಸುವುದು ಬೇಡ ಅದಕ್ಕಾಗಿಯೇ ಒಂದು ವೇದಿಕೆ ಇರುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ