ನಿಗದಿತ ಸಮಯದೊಳಗೆ ಕೆಲಸ ಮುಗಿಸಿ : ಜಮೀರ್‌ ಅಹಮದ್‌

ಬೆಂಗಳೂರು: 

     ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬಡವರಿಗೆ ರೂಪಿಸಿದ ವಸತಿ ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ನಂತರ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

    ನಿಗದಿತ ಅವಧಿ ಒಳಗೆ ಯೋಜನೆ ಪೂರ್ಣಗೊಳ್ಳದಿದ್ದರೆ ಬಡವರಿಗೆ ವಸತಿ ಕಲ್ಪಿಸುವ ಉದ್ದೇಶ ಈಡೇರುವುದಿಲ್ಲ. ಹೀಗಾಗಿ ಕಾಲಮಿತಿಯೊಳಗೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು. ವಿಳಂಬವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಕಲ್ಪಿಸುವ ಯೋಜನೆ ನೀರಿಕ್ಷಿತ ಮಟ್ಟದಲ್ಲಿ ಪ್ರಗತಿಯಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಆರಂಭಿಕ ಹಣ ಪಾವತಿಸಿದ ಅರ್ಜಿದಾರರಿಗೆ, ಫಲಾನುಭವಿಗಳಿಗೆ ಇನ್ನೂ ಮನೆ ಕೊಟ್ಟಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link