ಮಂಗಳೂರು:
ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸಂಭವಿಸಿದ ಮಣ್ಣು ಕುಸಿತ ದುರ್ಘಟನೆಯಲ್ಲಿ ಕಾರ್ಮಿಕನೋರ್ವ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಮಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಯೋಜನೆಯ ಗುತ್ತಿಗೆದಾರ ವೇಣುಗೋಪಾಲ್ ಮತ್ತು ಇತರ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬುಧವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕ ಚಂದನ್ ಕುಮಾರ್ ಎಂಬಾತ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ. ಘಟನೆಗೆ ಕಾರಣ ಪತ್ತೆ ಹಚ್ಚಲು ಇನ್ನೂ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಚಂದನ್ ಕುಮಾರ್ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಮೃತರ ಕುಟುಂಬಕ್ಕೆ ಗುತ್ತಿಗೆದಾರರು ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಪರಿಹಾರ ಕಾಯ್ದೆಯಡಿ ವಿಮೆ ಸಿಗಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.