ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ : ಯತ್ನಾಳ್ ವಿರುದ್ಧ ಎಫ್‌ಐಆರ್‌

ವಿಜಯಪುರ:

    ಇಸ್ಲಾಂ ಧರ್ಮದ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬುವರು ದೂರು ಸಲ್ಲಿಸಿದ್ದಾರೆ.

   “ಬಾಳ ಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ” ಎಂಬ ಆಧಾರರಹಿತ ಮತ್ತು ಧಾರ್ಮಿಕ ಅಪಮಾನಕಾರಕ ಹೇಳಿಕೆಯನ್ನು ಯತ್ನಾಳ್ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Recent Articles

spot_img

Related Stories

Share via
Copy link