ತುಮಕೂರು :
ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯ ಪ್ರಚೋದಿಸುವ ಪೋಸ್ಟ್ ಹಾಕಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೋಮು ವೈಷಮ್ಯಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 299 ಬಿಎನ್‌ಎಸ್ ಅಡಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಶಕುಂತಲಾ ನಟರಾಜ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, “ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಆದರೆ ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗ್ತಾರೆ” ಎಂದು ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ