ಬೆಂಗಳೂರು:
ನೀತಿ ಸಂಹಿತೆ ಜಾರಿಯಾಗಿರುವ ಸಮಯದಲ್ಲಿ ಜನರಿಗೆ ಫುಡ್ ಕಿಟ್ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹೆಸರಿನಲ್ಲಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಫುಡ್ ಕಿಟ್ ಹಂಚಿಕೆ ಆರೋಪ ಕೇಳಿ ಬಂದಿದ್ದು, ಕಿಟ್ ಹಂಚಿಕೆ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ದಾಳಿ ಮಾಡಿದ್ದು, ಈ ವೇಳೆ 7 ಲಕ್ಷಕ್ಕೂ ಅಧಿಕ ಮೌಲ್ಯದ ಫುಡ್ ಕಿಟ್ಗಳನ್ನು ಜಪ್ತಿ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.