ನಮ್ಮ ಮೆಟ್ರೋ: ಮಹಿಳಾ ಸಿಬ್ಬಂದಿ ಲೈಂಗಿಕ ಕಿರುಕುಳ : FIR ದಾಖಲು

ಬೆಂಗಳೂರು:

    ರಾಜಾಜಿನಗರ ಮೆಟ್ರೋ ನಿಲ್ದಾಣದ ಸಹಾಯಕ ಶಾಖಾಧಿಕಾರಿ ಗಜೇಂದ್ರ. ಪಿ ಅವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಮಹಿಳಾ ಭದ್ರತಾ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

   ಬೆಂಗಳೂರಿನ ನಮ್ಮ ಮೆಟ್ರೋ ನಿಲ್ಲಾಣದ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸೆಕ್ಯೂರಿಟಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.   

   ಗಜೇಂದ್ರ ಅವರು ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸೋದಲ್ಲದೆ, ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ತಮಗೆ ಸಹಕರಿಸದ ಮಹಿಳೆಯರಿಗೆ ಬೇರೆ ಕಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ‌ ಹಾಕಿದ್ದಾರೆ ಎಂದು ಮಹಿಳಾ ಭದ್ರತಾ ಸಿಬ್ಬಂದಿ ಆರೋಪಿಸಿದ್ದಾರೆ.

   ಈ ಬಗ್ಗೆ ಸೆಕ್ಯೂರಿಟಿ ಏಜೆನ್ಸಿ ಮಾಲೀಕರ ಗಮನಕ್ಕೂ ತರಲಾಗಿದ್ದು, ಅವರು ಸಹ ಸಹಕರಿಸುವಂತೆ ಒತ್ತಾಯ ಮಾಡಿದ್ದಾರೆ. ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಎಂದು ಬೆದರಿಕೆ ಹಾಕುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳಾ ಸಿಬ್ಬಂದಿ ಈ ಸಂಬಂಧ ಬಿಎಂಆರ್​ಸಿಎಲ್ ಹಿರಿಯ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿರುವ ಮಹಿಳಾ ಸಿಬ್ಬಂದಿಗೆ ನಿಲ್ದಾಣದ ಎಎಸ್ಓ ಗಜೇಂದ್ರ.ಪಿ ನಿಂದಿಸಿದ್ದಾರೆ. ಒತ್ತಾಯ ಪೂರ್ವಕವಾಗಿ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ವಿರೋಧ ವ್ಯಕ್ತಪಡಿಸಿದ್ರೆ ಸುಳ್ಳು ಕೇಸ್ ಹಾಕಿ ವರ್ಗಾವಣೆ ಮಾಡ್ತೀವಿ ಅಂತ ಬೆದರಿಸ್ತಾರೆ. ನಮ್ಮ ಏಜೆನ್ಸಿ ಮಾಲೀಕರಿಗೆ ದೂರು ನೀಡಿದ್ರೆ ಸಹಕರಿಸಿ, ಇಲ್ಲ ಕೆಲಸ ಬಿಡಿ ಅಂತಾರೇ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Recent Articles

spot_img

Related Stories

Share via
Copy link
Powered by Social Snap