ನವದೆಹಲಿ:
ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿ ಥಳಿಸಿದ ಪರಿಣಾಮ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ದೆಹಲಿಗೆ ವಾಪಸ್ ಬಂದಿಳಿದಿದೆ.
ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ವಿಲಕ್ಷಣ ಘಟನೆ ನಡೆದಿದ್ದು, ಪ್ರಯಾಣಿಕರೊಬ್ಬರು ಸಿಬ್ಬಂದಿಗೆ ಥಳಿಸಿದ ಪರಿಣಾಮ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿ ಆರೋಪಿ ಪ್ರಯಾಣಿಕರನ್ನು ಬಲವಂತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ಘಟನೆ ಕುರಿತು ವಿಮಾನಯಾನ ಸಂಸ್ಥೆ ದೆಹಲಿ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಲಾಗಿದೆ. ಈ ಪ್ರಯಾಣಿಕ ಪ್ರಸ್ತುತ ದೆಹಲಿ ವಿಮಾನ ನಿಲ್ದಾಣದಲ್ಲಿದ್ದಾರೆ. ವಿಮಾನದಲ್ಲಿ 225 ಪ್ರಯಾಣಿಕರಿದ್ದರು. ಸ್ವಲ್ಪ ಸಮಯದ ಬಳಿಕ ವಿಮಾನವು ಲಂಡನ್ಗೆ ಹಾರಿತು.
ಇನ್ನು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಏರ್ ಇಂಡಿಯಾ, “ಪ್ರಯಾಣಿಕನ ಗಂಭೀರ ಅಶಿಸ್ತಿನ ವರ್ತನೆ”ಯಿಂದಾಗಿ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಹಿಂತಿರುಗಿತು ಎಂದು ಹೇಳಿದೆ. “ಮೌಖಿಕ ಮತ್ತು ಲಿಖಿತ ಎಚ್ಚರಿಕೆಗಳಿಗೆ ಕಿವಿಗೊಡದೆ, ಪ್ರಯಾಣಿಕರು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ದೈಹಿಕ ಹಾನಿಯನ್ನುಂ ಟುಮಾಡುವುದು ಸೇರಿದಂತೆ ಅಶಿಸ್ತಿನ ವರ್ತನೆಯನ್ನು ಮುಂದುವರೆಸಿದರು. ಹೀಗಾಗಿ ಪೈಲಟ್ ಇನ್ ಕಮಾಂಡ್ ದೆಹಲಿಗೆ ಮರಳಲು ನಿರ್ಧರಿಸಿದರು ಮತ್ತು ಪ್ರಯಾಣಿಕರನ್ನು ಲ್ಯಾಂಡಿಂಗ್ ನಂತರ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು. ಪೊಲೀಸರಿಗೆ ಎಫ್‌ಐಆರ್ ಕೂಡ ದಾಖಲಿಸಲಾಗಿದೆ ಎಂದು ಏರ್‌ಲೈನ್ಸ್ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
