ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಯಾದಗಿರಿಯ ಸುರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಮೊಹಮ್ಮದ್ ರಸೂಲ್ ಕಡ್ಡರೆ ಎಂಬ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಯಾದಗಿರಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿರುದ್ಧ ಯಾದಗಿರಿಯ ಸುರಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಕಲಂ 505(1)(ಬಿ), 25(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
‘ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿಕೊಂಡಿರುವ ರಸೂಲ್, ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಕಡ್ಡರೆ, ಯಾದಗಿರಿ ಜಿಲ್ಲೆಯ ರಂಗಪೇಟೆ ನಿವಾಸಿಯಾಗಿದ್ದು, ಹೈದರಾಬಾದ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಹೈದರಾಬಾದ್ ಸೇರಿದಂತೆ ವಿವಿಧೆಡೆ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ