ಪೂಜಾ ಖೇಡ್ಕರ್ ತಾಯಿ ವಿರುದ್ಧ FIR ದಾಖಲು….!

ಪುಣೆ:

    ವಿವಾದಿತ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪುಣೆ ಪೊಲೀಸರು ಅವರ ವಿರುದ್ಧ ಗನ್ ದುರ್ಬಳಕೆ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

   ಗ್ರಾಮಸ್ಥರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುವ ಮೂಲಕ ಪರವಾನಗಿ ಪಡೆದ ಗನ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

   ಪುಣೆ ಪೊಲೀಸರು ಭಾನುವಾರ ಖೇಡ್ಕರ್ ಬಂಗಲೆಗೆ ಭೇಟಿ ನೀಡಿದ್ದರು. ಆದರೆ ಮನೋರಂ ಖೇಡ್ಕರ್ ಬಾಗಿಲು ತೆರೆಯಲು ನಿರಾಕರಿಸಿದ ನಿಮ್ಮ ಬಂದೂಕು ಪರವಾನಗಿಯನ್ನು ಏಕೆ ರದ್ದುಗೊಳಿಸಬಾರದು ಎಂಬುದನ್ನು ವಿವರಿಸುವಂತೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಅಲ್ಲದೆ 10 ದಿನಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ್ದಾರೆ.

   ಪುಣೆ ಜಿಲ್ಲೆಯ ಮುಲ್ಶಿ ತಹಸಿಲ್‌ನಲ್ಲಿ ಮಹಾರಾಷ್ಟ್ರದ ನಿವೃತ್ತ ಸರ್ಕಾರಿ ಅಧಿಕಾರಿಯಾಗಿರುವ ಪೂಜಾ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಖರೀದಿಸಿದ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ಈ ವೇಳೆ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ.

   ಅಕ್ಕಪಕ್ಕದ ರೈತರ ಜಮೀನನ್ನು ಖೇಡ್ಕರ್‌ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎರಡು ನಿಮಿಷಗಳ ಈ ವಿಡಿಯೋದಲ್ಲಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ತಮ್ಮ ಖಾಸಗಿ ಭದ್ರತಾ ಸಿಬ್ಬಂದಿಯೊಂದಿಗೆ ನೆರೆಹೊರೆಯವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ