ಧರ್ಮಸ್ಥಳದಲ್ಲಿ ಅಶಾಂತಿ: ಮಟ್ಟಣ್ಣವರ್‌, ತಿಮರೋಡಿ, ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌

ದಕ್ಷಿಣ ಕನ್ನಡ : 

   ಧರ್ಮಸ್ಥಳದಲ್ಲಿ ನಡೆದ ಗುಂಪು ಗಲಾಟೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್ , ಮಹೇಶ್ ಶೆಟ್ಟಿ ತಿಮರೋಡಿ , ಪುನೀತ್ ಕೆರೆಹಳ್ಳಿ  ವಿರುದ್ಧ ದೂರುಗಳು ದಾಖಲಾಗಿವೆ. ಧರ್ಮಸ್ಥಳದಲ್ಲಿ ಬುಧವಾರ ಸಂಭವಿಸಿದ ಗಲಭೆ  ಪ್ರಕರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಪುನೀತ್ ಕೆರೆಹಳ್ಳಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

   ಧರ್ಮಸ್ಥಳದಲ್ಲಿ ನಡೆದ ಗಲಭೆಯಲ್ಲಿ ಗಿರೀಶ್ ಮಟ್ಟಣ್ಣವರ್ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  ಬೆಳ್ತಂಗಡಿ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎಂಬವರು ಪುನೀತ್ ಕೆರೆಹಳ್ಳಿ ತಮ್ಮ ಯೂಟ್ಯೂಬ್‌ನಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿ ಮಾತನಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

   ಬೆಳ್ತಂಗಡಿ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 115(2), 189(2), 191(2), 351(2), 352, 190 ಅಡಿ ಎಫ್ಐಆರ್ ದಾಖಲಾಗಿದೆ. ಎಫ್ಐಆರ್‌ನಲ್ಲಿ ಗಿರೀಶ್ ಮಟ್ಟಣ್ಣವರ್ (ಎ1), ಮಹೇಶ್ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್ ಸಮೀರ್(ಎ3), ಜಯಂತ್(ಎ4) ಇತರರ ಹೆಸರನ್ನು ಉಲ್ಲೇಖಿಸಲಾಗಿದೆ.

Recent Articles

spot_img

Related Stories

Share via
Copy link