ಗಂಗಾ ಕಲ್ಯಾಣ ಯೋಜನೆ ಅಕ್ರಮ : FIR ದಾಖಲು

ಬೆಂಗಳೂರು:

     ಗಂಗಾ ಕಲ್ಯಾಣ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.

    ನಕಲಿ ದಾಖಲೆಗಳನ್ನು ನೀಡಿ ಯೋಜನೆಯಡಿ ಟೆಂಡರ್ ನೀಡಲಾಗಿದೆ ಎಂದು ಪಾಲಿಕೆ ಎಂಡಿ ಪಿ.ನಾಗೇಶ್ ದೂರಿನಲ್ಲಿ ಆರೋಪಿಸಿದ್ದಾರೆ.

    2019-20 ಮತ್ತು 2020-21ನೇ ಸಾಲಿನಲ್ಲಿ ಟೆಂಡರ್ ಹಂಚಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಯೋಜನೆಗೆ ಮೀಸಲಿಟ್ಟ ಹಣದಲ್ಲಿಯೂ ಅಕ್ರಮಗಳು ನಡೆದಿದೆ. ಇದರಲ್ಲಿ ಪಾಲಿಕೆಯ ಅಂದಿನ ಎಂಡಿ ಕೆ.ಎಂ.ಸುರೇಶ್, ಅಂದಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ ಎಂ.ಹರಗಾಪುರೆ ಮತ್ತಿತರರು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

     ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link