‘ಸೂಸೈಡ್ ಪಾಡ್’ ನಿಂದ ಮೊದಲ ಸಾವು

ನವದೆಹಲಿ :

   ಅನಾರೋಗ್ಯದಿಂದ ಬಳಲುತ್ತಿದ್ದ 64 ವರ್ಷದ ಅಮೆರಿಕನ್ ಮಹಿಳೆ ಆತ್ಮಹತ್ಯಾ ಯಂತ್ರವನ್ನು ಬಳಸಿಕೊಂಡು ಈ ಜಗತ್ತಿಗೆ ವಿದಾಯ ಹೇಳಿದ್ದಾರೆ ಎಂದು ವರದಿಯಾಗಿದೆ. ಸ್ವಿಟ್ಜರ್ಲೆಂಡ್ನಲ್ಲಿ, ಅವರು ನೋವಿಲ್ಲದೇ ಸಾಯುವ ‘ಆತ್ಮಹತ್ಯಾ ಯಂತ್ರ'( ಸೂಸೈಡ್ ಪಾಡ್) ದಿಂದ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

   ಈ ಮೆಷಿನ್ ನಲ್ಲಿ ಒಳಗೆ ಹೋಗಿ ಬಾಗಿಲು ಹಾಕಿಕೊಂಡು ಸ್ವಿಚ್ ಆನ್ ಮಾಡಿದರೆ ಕೆಲ ನಿಮಿಷಯದಲ್ಲಿ ಯಾವುದೇ ನೋವು ಇಲ್ಲದೇ ಪ್ರಾಣ ಹೋಗುತ್ತದೆ ಎಂದು ವರದಿಯಾಗಿದೆ. ಹೀಗೆ ಮಹಿಳೆಯೊಬ್ಬರು ಮೊದಲ ಬಾರಿಗೆ ಈ ಯಂತ್ರ ಬಳಸಿಕೊಂಡು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯು ಜಗತ್ತನ್ನು ಬೆಚ್ಚಿಬೀಳಿಸಿದೆ ಮತ್ತು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹಲವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

  ಸಾರ್ಕೋ ಎಂಬ ಸಂಸ್ಥೆ ಈ ವಿನೂತನ ಯಂತ್ರವನ್ನು ಆವಿಷ್ಕರಿಸಿದ್ದು, 2019ರಲ್ಲೇ ಈ ಆತ್ಮಹತ್ಯಾ ಸಾಧನವನ್ನು ಸಂಸ್ಥೆ ರಿವೀಲ್ ಮಾಡಿತ್ತು. ಈ ಯಂತ್ರವನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡವರು ಯಾವುದೇ ನೋವು ಅನುಭವಿಸದೇ ಸಾಯುತ್ತಾರೆ. ಈ ಯಂತ್ರವು ಆತ್ಮಹತ್ಯೆಗಾಗಿ ಬರುವ ವ್ಯಕ್ತಿ ಬಟನ್ ಒತ್ತಿದ ಕೂಡಲೇ ಆತನಿಗೆ ಆಕ್ಸಿಜನ್ ಬದಲಿಗೆ ನೈಟ್ರೋಜನ್ ಬಿಡುಗಡೆ ಮಾಡುತ್ತದೆ. ಇದರಿಂದ ವ್ಯಕ್ತಿ ಆಕ್ಸಿಜನ್ ಸಿಗದೇ ಹೈಪೋಕ್ಸಿಯಾದಿಂದ ಕೇವಲ ಒಂದೇ ನಿಮಿಷದಲ್ಲಿ ಪ್ರಾಣಬಿಡುತ್ತಾನೆ ಎಂದು ಹೇಳಲಾಗಿದೆ.

Recent Articles

spot_img

Related Stories

Share via
Copy link
Powered by Social Snap