ಇಲಿ ಜ್ವರಕ್ಕೆ ರಾಜ್ಯದಲ್ಲಿ ಮೊದಲ ಬಲಿ …..!

ಹಾವೇರಿ:

   ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಜೋರಾಗಿರುವಂತೆಯೇ ಅತ್ತ ಹಾವೇರಿಯಲ್ಲಿ ಇಲಿ ಜ್ವರಕ್ಕೆ ತುತ್ತಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಈಗ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ.

  ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್(72) ಎಂಬ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

   ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಉಮೇಶ್‌ ಅವರು ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ರಕ್ತ ತಪಾಸಣೆ ನಡೆಸಿದಾಗ ಇಲಿ ಜ್ವರ ಇರುವುದು ದೃಢಪಟ್ಟಿತ್ತು. ಇಲಿ ಜ್ವರದ ಜೊತೆ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

  ಇತ್ತೀಚೆಗೆ ಹಾವೇರಿ ತಾಲೂಕಿನ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಆದರೆ ಕಳೆದ 2 ದಿನಗಳ ಹಿಂದೆ ಮಂಗಳೂರಿನಲ್ಲಿ ಹಾವೇರಿ ನಿವಾಸಿ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap