ಕೊಹಿಮಾ:
ಬಿಜೆಪಿಯ ಮಿತ್ರಪಕ್ಷವಾದ ಎನ್‌ಡಿಪಿಪಿಯ ಹೆಕಾನಿ ಜಖಾಲು ಅವರು ದಿಮಾಪುರ್ ಕ್ಷೇತ್ರದಿಂದ ಗೆಲ್ಲುವ ಮೂಲಕ ಮೊದಲ ಮಹಿಳಾ ಶಾಸಕಿ ಆಯ್ಕೆಯಾಗಿದ್ದಾರೆ . ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಟ್ಟು 183 ಅಭ್ಯರ್ಥಿಗಳ ಪೈಕಿ ನಾಲ್ವರು ಮಹಿಳೆಯರಲ್ಲಿ 48 ವರ್ಷದ ವಕೀಲೆ ಹೆಕಾನಿ ಜಖಾಲು ಒಬ್ಬರು.ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ ಪರವಾಗಿ ಹೋರಾಡಿದ ಜಖಾಲು 1,500 ಕ್ಕೂ ಹೆಚ್ಚು ಮತಗಳ ಅಂತರದಿಂದ ಎಲ್‌ಜೆಪಿ (ರಾಮ್ ವಿಲಾಸ್) ನ ಅಜೆಟೊ ಝಿಮೊಮಿ ಅವರನ್ನು ಸೋಲಿಸಿದ್ದಾರೆ.
ವೃತ್ತಿಯಲ್ಲಿ ವಕೀಲೆಯಾಗಿರುವ ಜಖಾಲು ಕಳೆದ ಎರಡು ದಶಕಗಳಿಂದ ಸರ್ಕಾರೇತರ ಸಂಸ್ಥೆ”ಯೂತ್ನೆಟ್ ನಾಗಾಲ್ಯಾಂಡ್” ಎಂಬ ಎನ್ ಜಿ ಒ ನಡೆಸುತ್ತಿದ್ದಾರೆ. ಈ ಮೂಲಕ ಅಧ್ಯಯನ ಮಾಡಲು ಬಯಸುವ ಸಾವಿರಾರು ಯುವಕರಿಗೆ ಸಹಾಯ ಮಾಡುತ್ತಿದ್ದಾರೆ. .








