ಬೆಂಗಳೂರು : ಫ್ಲೈಓವರ್ ನಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ…..!

ಬೆಂಗಳೂರು: 

     ನಗರದ ನಾಯಂಡಹಳ್ಳಿ ಫ್ಲೈಓವರ್  ಮೇಲಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ ಸಂಭವಿಸಿದೆ. ನವೀನ್  ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಮೃತ ನವೀನ್ ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು. 

    ನವೀನ್​ ಇಂದು ಬೆಳಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನವೀನ್​ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದನು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ