ಎಫ್‍ಎಂ-ಚಂದನದಲ್ಲಿ 5 ಮತ್ತು 10ನೆ ಕ್ಲಾಸ್ ಮಕ್ಕಳಿಗೆ ಪಾಠ

 ತುಮಕೂರು : 

      ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22ನೆ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟಿಸಿದ್ದು, ಇಲಾಖೆಯು ಇದೀಗ 5 ರಿಂದ 10ನೆ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್‍ಲೈನ್ ಮತ್ತು ಆಫ್‍ಲೈನ್‍ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಪ್ರಕಟಿಸಿದೆ.

     ಕಳೆದ ವರ್ಷದಂತೆ ಈ ವರ್ಷವೂ ದೂರದರ್ಶನ ಚಂದನ ವಾಹಿನಿಯಲ್ಲಿ `ಸಂವೇದಾ’ ಕಾರ್ಯಕ್ರಮದ ಮೂಲಕ 1662 ವೀಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್‍ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ. ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್‍ನಲ್ಲಿ 1 ರಿಂದ 10ನೆ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದ 22 ಸಾವಿರಕ್ಕೂ ಹೆಚ್ಚು ಕಂಟೆಂಟ್‍ಗಳನ್ನು ಅಪ್‍ಲೋಡ್ ಮಾಡಲಾಗಿದೆ. ಈ ಆ್ಯಪ್‍ನಲ್ಲಿ ಮೌಲ್ಯವರ್ಧಿತ ಪಠ್ಯಪುಸ್ತಕಗಳೂ ದೊರೆಯಲಿವೆ. ಅವುಗಳೆಲ್ಲವನ್ನೂ ಡೌನ್‍ಲೋಡ್ ಮಾಡಿಕೊಂಡು ಪಾಠ ಅಭ್ಯಾಸ ಮಾಡಬಹುದು. ಜೊತೆಗೆ ಶಿಕ್ಷಕರು ಪಠ್ಯ ಬೋಧನೆಯ ಪುಟ್ಟ ವೀಡಿಯೋ ಮಾಡಿ ಮಕ್ಕಳ ಪೋಷಕರಿಗೆ ಹಂಚಿಕೊಳ್ಳಬಹುದು. ತರಗತಿವಾರು ಮಕ್ಕಳ ಪೋಷಕರ ವಾಟ್ಸ್ಯಾಪ್ ಗುಂಪುಗಳನ್ನು ಮಾಡಿ ಅವರನ್ನು ನಿಗದಿತವಾಗಿ ಸಂಪರ್ಕಿಸಿ ಮಕ್ಕಳ ಕಲಿಕೆಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ದೂರದರ್ಶನ ರೇಡಿಯೋ ಪಾಠ ಬೋಧನಾ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ತಿಳಿಸಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸಂಪರ್ಕಿಸಿ ಮೊಬೈಲ್ ಫೋನ್, ಇಂಟರ್‍ನೆಟ್, ರೇಡಿಯೋ, ದೂರದರ್ಶನ ಸೇರಿದಂತೆ ಮತ್ತಿತರ ತಾಂತ್ರಿಕ ಸೌಲಭ್ಯ ಮಾಹಿತಿ ಪಡೆದು, ಅವುಗಳ ಮೂಲಕ ಹೇಗೆ ಶಿಕ್ಷಣ ಪಡೆಯಬೇಕು ಎಂಬ ಬಗ್ಗೆ ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಕರಿಗೆ ಇಲಾಖೆ ಸೂಚಿಸಿದೆ.

      ಯಾವುದೇ ತಾಂತ್ರಿಕ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ತಮ್ಮ ಮನೆಯ ಸಮೀಪದ ಸಹೃದಯ ವ್ಯಕ್ತಿಯನ್ನು ಗುರುತಿಸಿ ಅವರ ಬಳಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಲು ಅನುವಾಗುವಂತೆ ಶಿಕ್ಷಕರು ಮನವೊಲಿಸುವಂತೆ ಶಿಕ್ಷಕರಿಗೆ ಸೂಚಿಸಿದೆ.
ಪ್ರತಿ ವಿದ್ಯಾರ್ಥಿಯ ವಿಷಯವಾರು ಕೃತಿ ಸಂಪುಟ (ಚೈಲ್ಡ್ ಪ್ರೊಫೈಲ್) ನಿರ್ವಹಣೆ ಮಾಡಿ, ಮೌಲ್ಯಮಾಪನ ಮಾಡಬೇಕು. ಇದರ ವಿವರವನ್ನು ಕಡ್ಡಾಯವಾಗಿ ವಿದ್ಯಾರ್ಥಿ ಸಾಮಥ್ರ್ಯ ಟ್ರ್ಯಾಕಿಂಗ್ ವ್ಯವಸ್ಥೆ (ಎಸ್‍ಎಟಿಎಸ್) ತಂತ್ರಾಂಶದಲ್ಲಿ ಅಳವಡಿಸಬೇಕು ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap