ಎಚ್.ಎಮ್.ಟಿಯಿಂದ 5 ಎಕರೆ ಭೂಮಿ ವಶ ಪಡಿಸಿಕೊಂಡ ಅರಣ್ಯ ಇಲಾಖೆ

ಬೆಂಗಳೂರು:

   ಪೀಣ್ಯ-ಜಾಲಹಳ್ಳಿ ಸರ್ವೆ ನಂ.1ರಲ್ಲಿ ಹಲವು ಕೋಟಿ ರೂಪಾಯಿ ಮೌಲ್ಯದ 5 ಎಕರೆ ಖಾಲಿ ಭೂಮಿಯನ್ನು ಅರಣ್ಯ ಇಲಾಖೆ ಎಚ್ಎಂಟಿಯಿಂದ ಮರುವಶಕ್ಕೆ ಪಡೆದಿದೆ. 

   ಎಚ್ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದು, ಅಲ್ಲಿ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

   1896ರ ಮೇ 29ರ ಸರಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

Recent Articles

spot_img

Related Stories

Share via
Copy link
Powered by Social Snap