ಚಿಕ್ಕಮಗಳೂರು
ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಹತ್ತಾರು ಎಕರೆ ಮೀಸಲು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮೀಸಲು ಅರಣ್ಯ ಚುರ್ಚೆಗುಡ್ಡ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಪಕ್ಕದಲ್ಲೇ ಇರುವ ರಿಸರ್ವ್ ಫಾರೆಸ್ಟ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆ ಜಾಗಕ್ಕೆ ಅಗ್ನಿಶಾಮಕ ವಾಹನ ಕೂಡ ಹೋಗಲು ಸಾಧ್ಯವಾಗದ ಹಿನ್ನೆಲೆ ಅಧಿಕಾರಿಗಳೇ ಸೊಪ್ಪನ್ನ ಕೈಯಲ್ಲಿಡಿದು ಬಡಿಯುವ ಮೂಲಕ ಬೆಂಕಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.
