ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ:

ಹುಬ್ಬಳ್ಳಿ, ಮಾರ್ಚ್ 26 ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳ ಪರಿಷಾಮಕಾರಿ ಅನಿಷ್ಠನಕ್ಕಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ ಎಂದರು.

ಮಾ. 28ರವರೆಗೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ಹಲವೆಡೆ ಮಳೆ; ಹವಮಾನ ಇಲಾಖೆ ಮುನ್ಸೂಚನೆ

ಬಜೆಟ್ ನಲ್ಲಿ ಘೋಷಿಸಿರುವ ಹೊಸ ಯೋಜನೆಗಳನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸಲು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ತಿಳಿಸಿದರು.ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿ ಸಿದ್ಧತೆ

ಸರ್ಕಾರ ಕೈಗಾರಿಕೋದ್ಯಮಕ್ಕೆ ಮಹತ್ವ ನೀಡಿದೆ. ನವೆಂಬರ್ ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರ ನೇತೃತ್ವದಲ್ಲಿ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿವೆ. ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆಗೆ ಆಕರ್ಷಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಾ.28 ರಿಂದ `SSLC’ ಪರೀಕ್ಷೆ : ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಸಿಗಲ್ಲ : ಸಚಿವ ಬಿ.ಸಿ.ನಾಗೇಶ್

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ ಸ್ಥಾನ ದಲ್ಲಿದೆ ಕಳೆದ ಮೂರು ತ್ರೈ ಮಾಸಿಕಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದು ವಿದೇಶಿ ಹೂಡಿಕೆದಾರರಿಗೆ ನಮ್ಮ ರಾಜ್ಯದ ಮೇಲಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯಡಿ ದಾಖಲೆಗಳನ್ನು ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು. ಲಕ್ಷ್ಮೀ ತೊಂಡಲಕರ್, ಶಂಬೋಜಿ‌ ಚವಾಣ ಸೇರಿದಂತೆ ಹಲವರಿಗೆ ಜಾತಿ, ಅಟ್ಲಾಸ್, ಪಹಣಿ ಪತ್ರಿಕೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಸಂಜಯ ಶೆಟ್ಟೆಣ್ಣವರ್, ಜಿಲ್ಲಾ ಪಂಚಾಯತ ಸಿಇಒ ಮಹಮ್ಮದ ರೋಷನ್ ಸೇರಿದಂತೆ ಇತರೆ ನಾಯಕರು ಉಪಸ್ಥಿತರಿದ್ದರು.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link