ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರ ಎಸ್.ಎಂ. ಶಂಕರ್ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಎಸ್.ಎಂ. ಶಂಕರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಎಸ್.ಎಂ.ಶಂಕರ್ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಹೋದರನಾಗಿದ್ದು, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದ ಎಸ್.ಎಂ. ಶಂಕರ್ ಬಳಿಕ ರಾಜಕೀಯದಲ್ಲಿ ಅಷ್ಟಾಗಿ ಕಾಣಿಸಿಕೊಂಡಿರಲಿಲ್ಲ.
ಎಸ್.ಎಂ. ಶಂಕರ್ ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅವರ ಸ್ವಗ್ರಾಮ ಸೋಮನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ