ಚಿಕ್ಕಬಳ್ಳಾಪುರ:

ಸಾರ್ವಜನಿಕರಿಗೆ ಆರೋಗ್ಯದ ಮಹತ್ವವನ್ನು ತಿಳಿಹೇಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು. 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಬಾಗೇಪಲ್ಲಿ ತಾಲ್ಲೂಕಿನ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಎಬಿ-ಎಆರ್ಕೆ ಕಾರ್ಡ್ ವಿತರಿಸಬೇಕು, ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಮಾಡಬೇಕು ಎಂದರು.
ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸೌಲಭ್ಯ, ಇ-ಸಂಜೀವಿನಿ ಮೂಲಕ ತಜ್ಞವೈದ್ಯರ ಸಂಪರ್ಕ, ಅಸಾಂಕ್ರಾಮಿಕ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಡಿಜಿಟಲ್ ಐಡಿ ಕಾರ್ಡ್ ವಿತರಣೆ, ಭಾರತೀಯ ಜನೌಷಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮಳಿಗೆ ವೀಕ್ಷಿಸಿದ ಡಿಸಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸ್ಥಳೀಯ ನಿವಾಸಿ ಎಂ.ವಿ.ರಾಜಾರೆಡ್ಡಿ ಅವರಿಗೆ ಎಬಿ-ಎಆರ್ಕೆ ಕಾರ್ಡ್ ವಿತರಿಸಿದರು.
ತಹಸೀಲ್ದಾರ್ ರವಿ, ಡಿಎಚ್ಒ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ.ಯೆಲ್ಲಾ ರಮೇಶ್ ಬಾಬು, ಟಿಎಚ್ಒ ಸತ್ಯನಾರಾಯಣ ರೆಡ್ಡಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








