ಬೆಂಗಳೂರು;
ವಿಶ್ವ ವಿಜೇತ ಆಟಗಾರರಿಗೆ ಸರ್ಕಾರ ಸೂಕ್ತವಾಗಿ ಗೌರವಿಸುವುದು. ರಾಜ್ಯದಲ್ಲಿ ಕ್ರೀಡೆಗಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲು, ಕ್ರೀಡಾ ನೀತಿಯನ್ನು ಬದಲಾಯಿಸಲು ಕೋರಿ ಮತ್ತು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಗೋವಿಂದರಾಜುರವರ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ಎಂದು ಕರ್ನಾಟಕ ರಾಜ್ಯ ಖೋ-ಖೋ ಸಂಸ್ಥೆ ಅಧ್ಯಕ್ಷರಾದ ಲೋಕೇಶ್ವರ ತಿಳಿಸಿದರು.
ಸರ್ಕಾರದಲ್ಲಿ ಮನವಿ
1. ವಿಶ್ವಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದಂತಹ ಮಕ್ಕಳಿಗೆ ಪಕ್ಷದ ರಾಜ್ಯಗಳಲ್ಲಿ ನೀಡುತ್ತಿರುವಂತೆ ‘ಎ’ ಗ್ರೇಡ್ ಮತ್ತು ‘ಬಿ’ ಗ್ರೇಡ್ ಹುದ್ದೆಯನ್ನು ನೀಡುವುದು ಮತ್ತು ಕನಿಷ್ಠ 50 ಲಕ್ಷ ರೂಪಾಯಿಗಳನ್ನಾದರು ಬಹುಮಾನದ ಹಣವಾಗಿ ಪ್ರತಿಯೊಬ್ಬ ಕ್ರೀಡಾಪಟುಗಳಿಗೆ ಕೊಡುವಂತಹ ನಿಯಮವನ್ನು ರೂಪಿಸಬೇಕು
2. ಅಧಿಕೃತ ರಾಜ್ಯ ಕ್ರೀಡಾ ಸಂಸ್ಥೆಗಳಿಗೆ ಈ ಹಿಂದೆ ನೀಡುತ್ತಿದ್ದಂತೆ ನೇರವಾಗಿ ಮನವಿಯನ್ನು ಪಡೆದು ಅನುದಾನವನ್ನು ನೀಡುವ ಪದ್ಧತಿಯನ್ನು ಜಾರಿಗೊಳಿಸಬೇಕು. ಈಗ ಇರುವ ರಾಜ್ಯ ಒಲಂಪಿಕ್ ಸಂಸ್ಥೆಯ ಮೂಲಕ ಅನುದಾನ ಕೇಳುವ ಪದ್ದತಿಯನ್ನು ರದ್ದುಗೊಳಿಸಬೇಕು.
3. ಎಲ್ಲಾ ರಾಜ್ಯ ಅಧಿಕೃತ (ರಾಷ್ಟ್ರೀಯ ಫೆಡರೇಷನ್ಗೆ ನೋಂದಣಿಯಾದ) ರಾಜ್ಯ ಕ್ರೀಡಾ ಸಂಸ್ಥೆಗಳನ್ನು ಕಡ್ಡಾಯವಾಗಿ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸದಸ್ಯರಾಗಿ ನೇಮಿಸುವಂತೆ ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ಒಲಂಪಿಕ್ ಅಸೋಸಿಯೇಷನ್ ಯಾವುದೇ ರಾಜ್ಯ ಕ್ರೀಡಾ ಸಂಸ್ಥೆಗಳನ್ನು ಅನವಶ್ಯಕ ಅನವಶ್ಯಕ ಕಾರಣಗಳಿಗೆ ತೊಂದರೆ ಕೊಡದಂತೆ ನೋಡಿಕೊಳ್ಳುವ ಕ್ರಮ ಕೈಗೊಳ್ಳಬೇಕು.
4. ರಾಷ್ಟ್ರೀಯ ಒಲಂಪಿಕ್ ಸಂಸ್ಥೆಯಲ್ಲಿರುವ ಯಾವುದೇ ಕಾನೂನುಗಳನ್ನು ರಾಜ್ಯ ಒಲಂಪಿಕ್ ಸಂಸ್ಥೆಯು ಬದಲಾಯಿಸಿದ್ದರೆ ಮತ್ತೆ ಅದನ್ನು ಸರಿಪಡಿಸುವಂತ ಮತ್ತು ಮುಂದೆ ರಾಷ್ಟ್ರೀಯ ಒಲಂಪಿಕ್ ಸಂಸ್ಥೆಯ ಅನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡದಂತೆ ಕ್ರಮ ಕೈಗೊಳ್ಳಬೇಕು. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸಂಸ್ಥೆಗೆ ಈಗಾಗಲೇ ನೀಡಿರುವ ಅನುದಾನದ ಬಗ್ಗೆ ದುರುಪಯೋಗಪಡಿಸಿಕೊಂಡಿರುವ ಆರೋಪಗಳಿದ್ದು ಅವುಗಳನ್ನು ತನಿಖೆ ಮಾಡಿಸಬೇಕು.
5. ರಾಜ್ಯದ ಎಲ್ಲಾ ಕ್ರೀಡಾ ಸಂಸ್ಥೆಗಳನ್ನು ಆಹ್ವಾನಿಸಿ ಅವರುಗಳ ಸಮಸ್ಯೆಗಳನ್ನು ಆಅಸುವುದು.
