ಬೆಂಗಳೂರು :
ಬೆಳೆ ಹಾನಿ ಪರಿಹಾರ ಹೆಚ್ಚಳ : ಯಾವ ಬೆಳೆಗೆ ಎಷ್ಟು ಪರಿಹಾರ?
ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2021 ನೇ ಜುಲೈನಿಂದ ನವೆಂಬರ್ ವರೆಗೆ ಉಂಟಾದ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂತ್ರಸ್ತರಾದ ವಿವಿಧ ಜನರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಐತಿಹಾಸಿಕ ತೀರ್ಮಾನ ಕೈಗೊಂಡಿದೆ.
ರಾಜ್ಯ ಸರ್ಕಾರವು ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರದ ಜೊತೆಗೆ ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನ ಕೈಗೊಂಡಿದೆ.
ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಪರಿಷ್ಕೃತ ದರ ಪಟ್ಟಿ
ಅತಿವೃಷ್ಟಿಯಿಂದ ಬೆಳೆ ಹಾನಿಗೊಂಡ ರೈತರಿಗೆ ಪರಿಹಾರ ಹೆಚ್ಚಳ
ರಾಜ್ಯದಲ್ಲಿ 2021 ನೇ ಜುಲೈಯಿಂದ ನವೆಂಬರ್ ವರೆಗೆ ಉಂಟಾದ ನೆರೆ ಹಾವಳಿಯಿಂದ 12.52 ಲಕ್ಷ ಹೆಕ್ಟೇರ್ ಬೆಳೆ ಹಾನಿ
ಬೆಳೆ ಹಾನಿಯ ಜಂಟಿ ಸಮೀಕ್ಷೆಯ ವಿವರಗಳನ್ನು ಪರಿಹಾರ ತಂತ್ರಾಂಶದಲ್ಲಿ ನಮೂದಿಸಿದ ಒಂದು ವಾರದೊಳಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಜಮೆ ಮಾಡಲು ಕ್ರಮ
ಈವರೆಗೆ ಸುಮಾರು 14.4 ಲಕ್ಷ ರೈತರ ಬ್ಯಾಂಕ್ ಖಾತೆಗೆ ರೂ. 926.40 ಕೋಟಿ ರೂ. ಮೊತ್ತ ಜಮೆ
ಕಳೆದ ಒಂದು ತಿಂಗಳಿನಲ್ಲಿ ಸುಮಾರು 12.90 ಲಕ್ಷ ರೈತರಿಗೆರೂ. 796.00 ಕೋಟಿ ರೂ.ಬೆಳೆ ಹಾನಿ ಪರಿಹಾರ ಪಾವತಿ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ