ಬೆಂಗಳೂರು
ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಳು ಕೂಡ ಬರುತ್ತವೆ. ಹಾಗೆಯೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹಲವು ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ ಅನುಮೋದನೆ ನೀಡುತ್ತಾ ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯದ ಹಲವು ರಾಷ್ಟ್ರೀಯ ಹೆದ್ದಾರಿಗಳಿಗೆ ಅನುದಾನನ್ನು ಕೂಡ ಘೋಷಣೆ ಮಾಡಿದ್ದಾರೆ. ಯಾವ ಮಾರ್ಗಗಳ ಹೆದ್ದಾರಿಗೆ ಎಷ್ಟು ಅನುದಾನ ನೀಡಿದ್ದಾರೆ ಅನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ತುಂಬಾ ಹೆದ್ದಾರಿ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಹಾಗೆಯೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧಾವಾರ (ಫೆಬ್ರವರಿ 08) ಕರ್ನಾಟಕದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ ಅನುದಾನವನ್ನು ಘೋಷಿಸಿದ್ದಾರೆ. ಈ ಪೈಕಿ ಬಿಜಾರಪುದ ಮಹಾರಾಷ್ಟ್ರ ಗಡಿಭಾಗದ ಕನಮಡಿ-ಬಿಜ್ಜರಗಿ-ತಿಕೋಟ ಸೆಕ್ಷನ್ನಲ್ಲಿ ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.