ತುಮಕೂರು :
ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಹಿಂದಿನ ಉದ್ದೇಶವನ್ನು ಬಿಜೆಪಿ ಹೈಕಮಾಂಡ್ ಬಹಿರಂಗಪಡಿಸಬೇಕು ಎಂದು ಮಾಜಿ ಡಿಸಿಎಂ ಪರಮೇಶ್ವರ್ ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ತೆಗೆದರೋ, ಮಾನಸಿಕ ಅಸ್ವಸ್ಥತೆ ಕಾರಣ ಕ್ಕೆ ತೆಗೆದರೊ ಯಾವ ಕಾರಣಕ್ಕೆ ತೆಗೆದರು ಎಂಬ ಕಾರಣವನ್ನು ಬಿಜೆಪಿ ವರಿಷ್ಠ ರು ಸ್ಪಷ್ಟ ಪಡಿಸಬೇಕು. ಕಾರಣ ಬಹಿರಂಗ ಪಡಿಸದೆ ಮುಖ್ಯ ಮಂತ್ರಿ ಸ್ಥಾನದಿಂದ ತೆಗೆದದ್ದು ಯಡಿಯೂರಪ್ಪ ಅವರಿಗೆ ಮಾಡಿದ ಅವಮಾನ ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
ಬಿಎಸ್ ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಭಾವುಕರಾಗಿ 75 ವರ್ಷ ವಯಸ್ಸು ಆಗಿರುವುದರಿಂದ ರಾಜೀನಾಮೆ ನೀಡುತ್ತಿದ್ದೇನೆ, ಮುಂದಿನವರಿಗೆ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಅನುಕೂಲ ಮಾಡಿಕೊಡುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಇದುವರೆಗೂ ಹೈಕಮಾಂಡ್ ಒಂದೇ ಒಂದು ಮಾತನ್ನು ಈ ಬಗ್ಗೆ ಹೇಳಿಲ್ಲ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
