ಬೆಂಗಳೂರು :
ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಸಾಯಿ ಗ್ರೌಂಡ್ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪರಮೇಶ್ವರ್ ಪಿಎ ರಮೇಶ್ ಕಾರಿನಲ್ಲಿ ಆತ್ಮಹತ್ಯೆಗೂ ಮುನ್ನಾ ಬರೆದು ಇಟ್ಟಿರುವ ಡೆತ್ ನೋಟ್ ಪೊಲೀಸರಿಗೆ ಲಭ್ಯವಾಗಿದೆ.
ರಮೇಶ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಈ ಕೆಳಗಿನಂತೆ ಅದರಲ್ಲಿ ಬರೆದಿದ್ದಾರೆ.
ಮೊನ್ನೆ ನನ್ನ ಮನೆಯಲ್ಲಿ ನಡೆದ ಐಟಿ ದಾಳಿಯಿಂದ ನಾನು ದಿಗ್ಭ್ರಾಂತನಾಗಿದ್ದೇನೆ. ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಬಡವರು ಬಡವರಾಗಿಯೇ ಉಳಿಯಬೇಕೆಂಬ ಸಂಸ್ಕೃತಿಯಿಂದ ತುಂಬಾ ಬೇಜಾರಾಗಿದ್ದೇನೆ. ಐಟಿ ಅಧಿಕಾರಿಗಳೇ ನನ್ನ ಹೆಂಡತಿ, ಮಕ್ಕಳಿಗೆ ತೊಂದರೆ ಕೊಡಬೇಡಿ ಎಂದು ರಮೇಶ್ ಡೆತ್ ನೋಟ್‍ನಲ್ಲಿ ಮನವಿ ಮಾಡಿದ್ದಾರೆ.
ಸೌಮ್ಯ ನನ್ನನ್ನು ಕ್ಷಮಿಸು, ಮಕ್ಕಳನ್ನು ಚೆನ್ನಾಗಿ ನೋಡಿಕೋ, ಲಕ್ಷ್ಮಿದೇವಿ, ಪದ್ಮಾ, ಸತೀಶ ನಿಮ್ಮೊಂದಿಗೆ ಹುಟ್ಟಿ ನಿಮಗೆ ಸಹಾಯ ಮಾಡಬೇಕೆಂಬ ನನ್ನ ಆಸೆ ಇಂದಿಗೆ ಕಮರಿದೆ. ನನ್ನ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡುತ್ತಿರುವ ವಿಎಸ್‍ಎಸ್ ವಿದ್ಯಾಸಂಸ್ಥೆಗೆ ಕೃತಜ್ಞನಾಗಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ನಿಮ್ಮನ್ನು ಸಾಕಬೇಕಿದ್ದ ನಾನು ಹೋಗುತ್ತಿದ್ದೇನೆ ಕ್ಷಮಿಸಿ ಎಂದು ತಮ್ಮ ಕುಟುಂಬಸ್ಥರಿಗೆ ಧನ್ಯವಾದ ಹಾಗೂ ಕ್ಷಮೆ ಕೇಳಿದ್ದಾರೆ.
ಇನ್ನು ರಮೇಶ್ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಕಾಂಗ್ರೆಸ್ ನಾಯಕರಾದ ಪರಮೇಶ್ವರ್, ಎಚ್.ಕೆ.ಪಾಟೀಲ್ ಸೇರಿಂತೆ ಹಲವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
